Image
Breaking News
• 28 ವರ್ಷಗಳಿಂದ  ಗೋಬರ್ ಗ್ಯಾಸ್ ನಿಂದಲೇ ಅಡುಗೆ • ಬೇಲಿಯೇ ಎದ್ದು ಹೊಲ ಮೇದಂತಾಗಿದೆ :ನಾಗರಾಜ ಛಬ್ಬಿ. • ಮಹಿಳೆಯರು ಕೃಷಿ ಕ್ಷೇತ್ರದ ಆಧಾರ :ಗಣಪತಿ ಹೆಗಡೆ.
01 Jun 2026 | 
ರಾಜ್ಯದ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲವನ್ನು ಪರಿಹರಿಸಲು ಆಗ್ರಹಿಸಿ ಪ್ರತಿಭಟನೆ

ರಾಜ್ಯದ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲವನ್ನು ಪರಿಹರಿಸಲು ಆಗ್ರಹಿಸಿ ಪ್ರತಿಭಟನೆ



Author : Vinayak M Bhat


 


ರಾಜ್ಯದ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲವನ್ನು ಬಗೆಹರಿಸಲು ಆಗ್ರಹಿಸಿ ಕಲಘಟಗಿ ತಾಲೂಕಿನ ಸರಕಾರಿ ಪದವಿ ಕಾಲೇಜು ಎದರುಗಡೆ ಎಐಡಿಎಸ್ಓ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
 


 

 ಪ್ರತಿಭಟನೆಯನ್ನು ಉದ್ದೇಶಿಸಿ ಜಿಲ್ಲಾ ಕಾರ್ಯದರ್ಶಿ ಶಶಿಕಲಾ ಮೇಟಿ ಮಾತನಾಡಿ ರಾಜ್ಯಾದ್ಯಂತ ಪದವಿ ತರಗತಿಗಳು ಪ್ರಾರಂಭವಾಗಿ ತಿಂಗಳು ಕಳೆದರೂ ಇಲ್ಲಿಯವರೆಗೂ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಿಲ್ಲ. ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿದ್ದು ಇಲ್ಲಿಯವರೆಗೂ ತರಗತಿಗಳು ಸರಿಯಾಗಿ ನಡೆಯದೆ ಇರುವುದರಿಂದ ವಿದ್ಯಾರ್ಥಿಗಳು ಸಾಕಷ್ಟು ಆತಂಕದಲ್ಲಿದ್ದಾರೆ. ಇದು ಅವರ ಶೈಕ್ಷಣಿಕ ಭವಿಷ್ಯವನ್ನು ಅತಂತ್ರವನ್ನಾಗಿಸಿದೆ. ಮುಂದಿನ ತಿಂಗಳು ಪದವಿ ವಿದ್ಯಾರ್ಥಿಗಳ ಮೊದಲ ಆಂತರಿಕ ಪರೀಕ್ಷೆಗಳು ನಡೆಯಬೇಕಿದ್ದು ಪಾಠಗಳು ಇನ್ನೂ ಆರಂಭವಾಗಿಲ್ಲ. ಯುಜಿಸಿಯ ಹೊಸ ನಿರ್ದೇಶನಗಳು ಹಾಗೂ ಕೋರ್ಟನಲ್ಲಿ ನಡೆಯುತ್ತಿರುವ ಮೊಕದ್ದಮೆಯಿಂದ ಅತಿಥಿ ಉಪನ್ಯಾಸಕರ ನೇಮಕಾತಿಯು ನೆನೆಗುದಿಗೆ ಬಿದ್ದಿದೆ. ಶೈಕ್ಷಣಿಕ ವಿಷಯಗಳಲ್ಲಿ ರಾಜ್ಯ ಸರ್ಕಾರವು ಕೇಂದ್ರದ ನಿರ್ಧಾರಗಳನ್ನು ಪಾಲಿಸವುದು ಖಡ್ಡಾಯವಲ್ಲ, ಎಂದು ಸರ್ವೋಚ್ಚ ನ್ಯಾಯಾಲಯದ ನಿರ್ದೇಶನವಿದೆ. ಇದಕ್ಕೆ ಅನುಗುಣವಾಗಿ ರಾಜ್ಯ ಸರ್ಕಾರವು ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಗೆ ಪೂರಕವಾದ ಸ್ಪಷ್ಟ ನಿಲುವು ತಾಳಬೇಕು. ಇಂತಹ ಪರಿಸ್ಥಿತಿಯಲ್ಲಿ, ರಾಜ್ಯ ಸರ್ಕಾರವು ಶೈಕ್ಷಣಿಕ ಚಟುವಟಿಕೆಗಳು ಸರಾಗವಾಗಿ ನಡೆಯುವ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ತುರ್ತಾಗಿ ಕೈಗೊಂಡು ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲವನ್ನು ಪರಿಹರಿಸಬೇಕೆಂದು ಅಗ್ರಹಿಸಿದರು.
 


 

 ಪ್ರತಿಭಟನೆಯಲ್ಲಿ ಕಛೇರಿ ಕಾರ್ಯದರ್ಶಿ ಸ್ಫೂರ್ತಿ ಚಿಕ್ಕಮಠ, ಕಾರ್ಯಕರ್ತರಾದ ಸಿದ್ದು, ರವಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.