Image
Breaking News
• ಗೌರಿ ಗಣೇಶ ಹಬ್ಬದ ಶಾಂತಿಸಭೆಯಲ್ಲಿ 500ಕ್ಕೂ ಹೆಚ್ಚು ಜನರು ಭಾಗಿ.ಸಿ ಪಿ ಐ ಶ್ರೀ ಶೈಲ ಕೌಜಲಗಿ ಯವರಿಂದ ಕಾನೂನಿನ ಎಚ್ಚರಿಕೆ, ಶಾಂತಿಯ ಉಪದೇಶ. • ಶರಣರ ಮಾರ್ಗದಲ್ಲಿ ನಡೆಯಿರಿ : ಡಾ ಸಿ. ಸೋಮಶೇಖರ • ಶರಣರ ಮಾರ್ಗದಲ್ಲಿ ನಡೆಯಿರಿ : ಡಾ ಸಿ. ಸೋಮಶೇಖರ
11 Sep 2026 | 
ಮೊಕದ್ದಮೆ ಇದ್ದರೂ ನಕಲಿ ದಾಖಲೆ ಸೃಷ್ಟಿ ತಳವಾರ  ಆರೋಪ.

ಮೊಕದ್ದಮೆ ಇದ್ದರೂ ನಕಲಿ ದಾಖಲೆ ಸೃಷ್ಟಿ ತಳವಾರ  ಆರೋಪ.



Author : Vinayak M Bhat

ನ್ಯಾಯಾಲಯದಲ್ಲಿ ಪ್ರಕರಣ ಇದ್ದಾಗಲೂ ನಕಲಿ ದಾಖಲೆ ಸೃಷ್ಟಿಸಿದ್ದಾರೆ ಎಂದು ಸಿದ್ದಪ್ಪ  ತಳವಾರ ಆರೋಪಿಸಿದ್ದಾರೆ.
ಅವರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ತಾಲೂಕಿನ ರಾಮನಾಳ ಗ್ರಾಮದ ರಿ.ಸ.ನಂ 75ರ 16ಎ. 17 ಗುಂಟೆ ಜಮೀನು ಪ್ರಕರಣ ಈಗಾಗಲೇ ನ್ಯಾಯಾಲಯದಲ್ಲಿದೆ. ಆದರೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಮೂಲ ವಾರಸುದಾರರಿಗೆ ಯಾವುದೇ ಮಾಹಿತಿ ಹಾಗೂ ನೋಟಿಸ್ ನೀಡದೆ ನಕಲಿ ಸಹಿ ಮಾಡಿ ಬೇರೆಯವರ ಹೆಸರನ್ನು ದಾಖಲಿಸಿದ್ದಾರೆ. ಈ ಕುರಿತು ಕಲಘಟಗಿ ಪೊಲೀಸ್ ಠಾಣೆಯಲ್ಲಿ ಜ. 17ರಂದು ಪ್ರಕರಣವನ್ನು ದಾಖಲಿಸಲಾಗಿದೆ. ಮೇಲಾಧಿಕಾರಿಗಳು ಈ ಕುರಿತು ಕೂಡಲೇ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಉಗ್ರವಾದ ಹೋರಾಟ ಮಾಡುವುದಾಗಿ ಎಚ್ಚರಿಸಿದ್ದಾರೆ.
ಈ ಸಂದರ್ಭದಲ್ಲಿ ಎಲ್ಲಪ್ಪ ಮೇಲಿನಮನಿ, ಹೋಗಪ್ಪ ಆಚಮಟ್ಟಿ, ದೇವರಾಜ್ ತಳವಾರ ಇದ್ದರು.