Image
Breaking News
• ಗೌರಿ ಗಣೇಶ ಹಬ್ಬದ ಶಾಂತಿಸಭೆಯಲ್ಲಿ 500ಕ್ಕೂ ಹೆಚ್ಚು ಜನರು ಭಾಗಿ.ಸಿ ಪಿ ಐ ಶ್ರೀ ಶೈಲ ಕೌಜಲಗಿ ಯವರಿಂದ ಕಾನೂನಿನ ಎಚ್ಚರಿಕೆ, ಶಾಂತಿಯ ಉಪದೇಶ. • ಶರಣರ ಮಾರ್ಗದಲ್ಲಿ ನಡೆಯಿರಿ : ಡಾ ಸಿ. ಸೋಮಶೇಖರ • ಶರಣರ ಮಾರ್ಗದಲ್ಲಿ ನಡೆಯಿರಿ : ಡಾ ಸಿ. ಸೋಮಶೇಖರ
11 Sep 2026 | 
ಕೂಲಿ ಕಾರ್ಮಿಕರೊಂದಿಗೆ ಕಾರ್ಮಿಕನಾದ ಕರ್ನಾಟಕದ ಕಾಂಗ್ರೆಸ್ ಸರಕಾರದ ಕಾರ್ಮಿಕ ಸಚಿವ ಸಂತೋಷ ಲಾಡ್. 

ಕೂಲಿ ಕಾರ್ಮಿಕರೊಂದಿಗೆ ಕಾರ್ಮಿಕನಾದ ಕರ್ನಾಟಕದ ಕಾಂಗ್ರೆಸ್ ಸರಕಾರದ ಕಾರ್ಮಿಕ ಸಚಿವ ಸಂತೋಷ ಲಾಡ್.

 



Author : Vinayak M Bhat

ವಿಕಸಿತ ಭಾರತ ಆಜೀವಿಕ ಮಿಷನ್ ಗ್ರಾಮೀಣ ಯೋಜನೆಯಡಿ ಕಾರ್ಮಿಕ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಧಾರವಾಡ ತಾಲೂಕಿನ ನಿಗದಿ ಗ್ರಾಮದ ಡುಮರಿ ಕೆರೆ ಪುನಃಚೆತನ ಮತ್ತು ಹೂಳು ಎತ್ತುವ ಕಾಮಗಾರಿ ವೀಕ್ಷಣೆ ಜೊತೆಗೆ ಅವರೊಂದಿಗೆ ಕಾಮಗಾರಿಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು  ಗುದ್ದಲಿಯಿಂದ ಮಣ್ಣು ಕಡೆದು ಬುಟ್ಟಿಯಲ್ಲಿ ಮಣ್ಣು ತುಂಬಿ ತಲೆಯ ಮೇಲೆ ಹೊತ್ತು ಕೂಲಿ ಕಾರ್ಮಿಕರೊಂದಿಗೆ ತಾವೂ ಕಾರ್ಮಿಕರಾದರು.


ನಂತರ ಕಾರ್ಮಿಕರೊಂದಿಗೆ ಸಂವಾದ ನಡೆಸಿದ ಸಚಿವರು ಇಂತಹ ಯೋಜನೆ ಯಿಂದ ವಲಸೆ ತಪ್ಪುವುದಲ್ಲದೆ ಸರಕಾರ ದಿಂದಲೇ ಹೆಣ್ಣು ಗಂಡಿಗೆ ಸಮನಾದ ಕೂಲಿ ಸಿಗುತ್ತದೆ, ಯೋಜನೆಯ ಲಾಭ ಪಡೆದುಕೊಂಡು ಆರ್ಥಿಕವಾಗಿ ಸಬಲರಾಗಿರಿ ಎಂದರು.


ಈ ಸಂಧರ್ಭದಲ್ಲಿ  ಪಂಚ ಗ್ಯಾರಂಟಿ ಜಿಲ್ಲಾ ಅಧ್ಯಕ್ಷ ಎಸ್ ಆರ್ ಪಾಟೀಲ ಕಾರ್ಯನಿರ್ವಾಹಕ ಅಧಿಕಾರಿ ಗಂಗಾಧರ ಕಂದಕೂರು   ಸಹಾಯಕ ನಿರ್ದೇಶಕ ಚಂದ್ರು ಪೂಜಾರಿ,ಗ್ರಾ ಪಂ ಅಭಿವೃದ್ಧಿ ಅಧಿಕಾರಿ ಜ್ಯೋತಿ ಛಲವಾದಿ, ಅಧಿಕಾರಿಗಳು ಉಪಸ್ಥಿತರಿದ್ದರು.